ಕ್ಷುಲ್ಲಕ ಕಾರಣಕ್ಕೆ ಆರ್ಎಸ್ಎಸ್ (RSS) ಪ್ರಮುಖನಿಗೆ ಅನ್ಯಕೋಮಿನ ಇಬ್ಬರು ಚಾಕು ಇರಿದ ಘಟನೆ ಕೋಲಾರ (Kolar) ಜಿಲ್ಲೆಯ ಮಾಲೂರು ಪಟ್ಟಣದ ಮಾರಿಕಾಂಬ ರಸ್ತೆಯಲ್ಲಿ ಘಟನೆ ನಡೆದಿದೆ.
ರವಿ ಎಂಬಾತ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಕ್ಷುಲ್ಲುಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆ ಬಿಡಿಸಲು ಹೋದ ರವಿಗೆ ಚಾಕು ಇರಿಯಲಾಗಿದೆ. ಶನಿವಾರ ಮಧ್ಯಾಹ್ನ ಅಂಗಡಿ ಮುಂದೆ ಬೈಕ್ ಟಚ್ ಆಗಿದ್ದಕ್ಕೆ ಗಲಾಟೆ ನಡೆಯುತಿತ್ತು. ಆ ವೇಳೆ ಗಲಾಟೆ ಬಿಡಿಸಲು ಹೋದಾಗ ಅನ್ಯಕೋಮಿನ ಇಬ್ಬರು ರವಿಗೆ ಚಾಕುವಿನಿಂದ ಇರಿದಿದ್ದಾರೆ. ರವಿ ಮುಖಕ್ಕೆ ಚಾಕು ಹಾಕಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಸ್ಥಳದಲ್ಲಿ ಜಮಾಯಿಸಿದ ಅರ್ಎಸ್ಎಸ್ ಮುಖಂಡರು ಮಾಲೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನು ಓದಿ : – ಚಾಮರಾಜನಗರದಲ್ಲಿ ಹಳ್ಳ ದಾಟಲು ಸೇತುವೆಯಿಲ್ಲದೆ ಗ್ರಾಮಸ್ಥರ ಪರದಾಟ
ಚಾಕು ಇರಿತ ಮಾಡಿದ ಇಬ್ಬರು ಗಾಂಜಾ ವ್ಯಾಸನಿಗಳು ಎನ್ನಲಾಗಿದೆ. ಇಬ್ಬರು ರವಿ ಮಾಲೀಕತ್ವದ ಸ್ಟೀಲ್ ಅಂಗಡಿಯ ಮುಂಭಾಗ ಗಲಾಟೆ ಮಾಡುತ್ತಿದ್ದರು. ಈ ವೇಳೆ ಗಲಾಟೆಯನ್ನು ಬಿಡಿಸಿ ಅಂಗಡಿಗೆ ವಾಪಸ್ಸಾಗುವಾಗ ರವಿ ಮೇಲೆ ಚಾಕು ಇರಿಯಲಾಗಿದೆ. ಓರ್ವ ಆಟೋ ಚಾಲಕ, ಮತ್ತೋರ್ವ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಓರ್ವ ಆರೋಪಿಯನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಎಸ್ಕೇಪ್ ಆಗಿದ್ದು ಪೊಲೀಸರು ಶೋಧ ನಡೆಸಿದ್ದಾರೆ.
ಇದನ್ನು ಓದಿ : – ತುಮಕೂರು ಮಳೆಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ