ಕಳೆದ 2 ವರ್ಷದಿಂದ ಕೊರೊನಾ (corona)ಹಿನ್ನೆಲೆಯಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಸಾವಿರಾರು ಭಕ್ತರ ದಂಡೇ ಹರಿದು ಬರುತ್ತಿದೆ.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಕೋಲಾರ (kolara)ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ (chikka tirupathi ) ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇಡೀ ದೇವಾಲಯವನ್ನು ಹೂವಿನಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ.
ಇದನ್ನು ಓದಿ : – ಕೇಂದ್ರದ ನೋಟು ಅಮಾನ್ಯೀಕರಣ ನಿರ್ಧಾರವನ್ನು ಎತ್ತಿ ಹಿಡಿದಿದ ಸುಪ್ರೀಂಕೋರ್ಟ್