ಮೈಸೂರು ದಸರಾ ಹಿನ್ನೆಲೆ – ಅಂತರ್ ರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ವಿಶ್ವವಿಖ್ಯಾತ ಮೈಸೂರು ( mysore ) ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ ಮಾಡಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ( state goverment )ದಸರಾಕ್ಕೆ ಬರುವ ಅಂತಾರಾಜ್ಯದ ಜನರಿಗೆ ಗುಡ್ ನ್ಯೂಸ್ ನೀಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ ಅಂತಾರಾಜ್ಯ ವಾಹನಗಳಿಗೆ ಸರ್ಕಾರ ತೆರಿಗೆ ವಿನಾಯಿತಿ (Tax Exemption) ಘೋಷಣೆ ಮಾಡಿದೆ. ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ವ್ಯಾಪ್ತಿಯ ಕೆ.ಆರ್.ಎಸ್ ಜಲಾಶಯ ವೀಕ್ಷಿಸಲು ಹೋಗುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ಮಾಡಿ ಸಾರಿಗೆ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6 ರವರೆಗೆ ಈ ತೆರಿಗೆ ವಿನಾಯಿತಿ ಇರಲಿದೆ.

ಇದನ್ನೂ ಓದಿ : – ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!