ರಾಯಚೂರು ( raichuru ) ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ಪೊಲೀಸರು 6 ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ.
ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ 6 ಜನ ನಕಲಿ ಪತ್ರಕರ್ತರನ್ನು ಬಂಧಿಸಲಾಗಿದೆ. ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಸೇರಿದಂತೆ ಮೂವರು ಯುವತಿಯರು, ಮೂವರು ಯುವಕರು ಯೂ ಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದರು. ಇದನ್ನೂ ಓದಿ : – ಹಬ್ಬ ಇರೋದ್ರಿಂದ ಜನರಿಗೆ ತೊಂದ್ರೆ ಆಗುತ್ತೆ ಅಂತ ಪರಿಶೀಲನೆಗೆ ಹೋಗಿಲ್ಲ – ಸಿಎಂ ಬೊಮ್ಮಾಯಿ
ಕ್ಯಾಮರಾ ಮತ್ತು ಲೋಗೋ ಹಿಡಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಅಕ್ಕಿ ಮಾರಾಟಗಾರ ವಿರೇಶ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಜಪ್ತಿ ಮಾಡಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : – ಜೀವ ಬೆದರಿಕೆ ಆರೋಪ – ಸಚಿವ ಆನಂದ್ ಸಿಂಗ್ ವಿರುದ್ಧ ಪ್ರಕರಣ ದಾಖಲು