ಮಲೆನಾಡು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಮತ್ತೆ ಮಳೆ – ಹಳದಿ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ( karanataka ) ದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದಿನಿಂದ ಅ. 22ರವರೆಗೆ ಹಳದಿ ಅಲರ್ಟ್ ( yellow alert ) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ( karanataka ) ದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದಿನಿಂದ ಅ. 22ರವರೆಗೆ ಹಳದಿ ಅಲರ್ಟ್ ( yellow alert ) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಚಾಮರಾಜನಗರ, ಚಿಕ್ಕಮಗಳೂರು ( chamaraj nagara ) ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಭಾರೀ ಮಳೆ ಸುರಿಯಲಿದೆ. ಅ. 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ದಾಖಲೆಯ ಪ್ರಮಾಣದ ಮಳೆಯಾಗಿದ್ದು, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಈ ವರ್ಷ 1706 ಮಿಮೀ ಮಳೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.  ಇದನ್ನೂ ಓದಿ : – YSR ಪಕ್ಷಕ್ಕೆ ಎಚ್ಚರಿಕೆ ನೀಡಲು ವೇದಿಕೆ ಮೇಲೆ ಚಪ್ಪಲಿ ತೋರಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್..!

2017ರಲ್ಲಿ ಬೆಂಗಳೂರಿನಲ್ಲಿ 1696 ಮಿಮೀ ಮಳೆಯಾಗಿತ್ತು. ಆ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ. ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ.

 ಇದನ್ನೂ ಓದಿ : – ತಮಿಳುನಾಡು ಸಿಎಂ ಜಯಲಲಿತಾ ಸಾವಿಗೆ ಆಪ್ತೆ ಶಶಿಕಲಾ ಕಾರಣ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!