ಬಿಜೆಪಿ (BJP)ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯುತ್ತಿದ್ದಾರೆ. ಯಾವ ಮಂತ್ರಿ ಮಗನೂ ಬಲಿಯಾಗಲ್ಲ. ಬಡವರ ಮಕ್ಕಳು ಸಾಯುತ್ತಿದ್ದಾರೆ.
ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ (NALIN KUMAR KATIL), ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಬಸ್ ಯಾತ್ರೆ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟರು. ಇದನ್ನು ಓದಿ :- NPS ರದ್ದುಗೊಳಿಸಿ OPS ಜಾರಿ ಮಾಡಿ – ಶಿವಮೊಗ್ಗದಲ್ಲಿ ಪ್ರತಿಭಟನೆ
ಡಬ್ಬಲ್ ಇಂಜಿನ್ ಸರ್ಕಾರ ಅಂತ ಹೇಳುತ್ತಾರೆ, ಯಾವ ಮಾತು ಉಳಿಸಿಕೊಂಡಿದ್ದಾರೆ ಹೇಳಿ? ಮೀನುಗಾರರಿಗೆ ಸರಿಯಾಗಿ ಸೀಮೆಎಣ್ಣೆ ಕೊಡುತ್ತಿಲ್ಲ, ಗ್ಲೋಬಲ್ ಹೂಡಿಕೆದಾರರ ಸಮಾವೇಶದಲ್ಲಿ ಕರಾವಳಿ ( KARAVALI )ಗೆ ಏನು ಸಿಕ್ಕಿತ್ತು? ಯಾರು ಕೂಡಾ ಇಲ್ಲಿ ಹೂಡಿಕೆ ಮಾಡಲು ತಯಾರಿಲ್ಲ. ಕೋಮು ಗಲಭೆ ವಿಷ ಭಿತ್ತಿದ ಕಾರಣ ಮಕ್ಕಳು ವಿದ್ಯಾಭ್ಯಾಸಕ್ಕೆ ಬರುತ್ತಿಲ್ಲ. ಶಿಕ್ಷಣದಲ್ಲಿ ಮೊದಲ ರ್ಯಾಂಕ್ ಪಡಿತಿದ್ದ ಉಡುಪಿ ಜಿಲ್ಲೆ ಹಿಂದುಳಿದಿದೆ ಎಂದರು.
ಇದನ್ನು ಓದಿ :- ರಾಜ್ಯಕ್ಕೆ 100 ಬಾರಿ ಮೋದಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ – ಸಿದ್ದರಾಮಯ್ಯ