ಯುದ್ಧಪೀಡಿತ ಉಕ್ರೇನ್ ದೇಶದಲ್ಲಿ ಭದ್ರತಾ ಪರಿಸ್ಥಿತಿ ತೀವ್ರ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತವು ತನ್ನ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಉಕ್ರೇನ್ ರಾಜಧಾನಿ ಕೀವ್ ಮತ್ತು ಇತರ ಪ್ರಮುಖ ನಗರಗಳ ಮೇಲೆ ರಷ್ಯಾದ ದಾಳಿ ತೀವ್ರವಾದ ನಂತರ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ” ಉಕ್ರೇನ್ ದೇಶದ ಪಶ್ಚಿಮ ಭಾಗಗಳಲ್ಲಿ ರಷ್ಯಾದ ದಾಳಿ ತೀವ್ರವಾಗಿರುವ ಕಾರಣ ಮತ್ತು ಅಲ್ಲಿನ ಭದ್ರತಾ ಪರಿಸ್ಥಿತಿ ತೀವ್ರ ಹದಗೆಡುತ್ತಿರುವುದರಿಂದ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮುಂದಿನ ಬೆಳವಣಿಗೆಗಳ ಪರಿಸ್ಥಿತಿಯನ್ನು ಮರು ಮೌಲ್ಯಮಾಪನ ಮಾಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
0 294 Less than a minute