ಭಜರಂಗ ದಳದ ಕಾರ್ಯಕರ್ತರು ಪಬ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳ ಫೇರ್ ವೆಲ್ ಪಾರ್ಟಿಗೆ ತಡೆ ಒಡ್ಡಿದ್ದಾರೆ. ಸೋಮವಾರ ರಾತ್ರಿ ಕಾಲೇಜು ಫೇರ್ ವೆಲ್ ನೆಪದಲ್ಲಿ ಮಂಗಳೂರಿನ ( mangalore ) ಪ್ರತಿಷ್ಠಿತ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ.
ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳೊಂದಿಗೆ ತುಂಡುಡುಗೆ ತೊಟ್ಟು ಫೇರ್ ವೆಲ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಏಕಾಏಕಿ ಪಬ್ ಗೆ ನುಗ್ಗಿದ ಭಜರಂಗದಳ ಕಾರ್ಯಕರ್ತರು ಕೆಲ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಬುದ್ಧಿ ಹೇಳಿ ಪಬ್ ನಿಂದ ಹೊರಗೆ ಕಳುಹಿಸಿದ್ದಾರೆ. ನಂತರ ಘಟನೆ ಕುರಿತಂತೆ ಮಾಹಿತಿ ಪಡೆದ ಪೊಲೀಸರು, ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ. ಬಳಿಕ ಅರ್ಧದಲ್ಲಿಯೇ ಪಾರ್ಟಿ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಪಬ್ ನಿಂದ ಹೊರನಡೆದಿದ್ದಾರೆ. ಇದನ್ನೂ ಓದಿ : – ಕಾರ್ಗಿಲ್ ವಿಜಯ್ ದಿವಸ್ – ರಾಷ್ಟ್ರಪತಿ, ಪ್ರಧಾನಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಮಂಗಳೂರಿನ( mangalore ) ಪಬ್ ಮೇಲೆ ಭಜರಂಗದಳ ದಾಳಿ ವಿಚಾರವಾಗಿ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ ಪ್ರಕರಣ ದಾಖಲು ಮಾಡುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ( shashi kumar )ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ನಗರದಲ್ಲಿ ಯಾವುದೇ ಪಬ್ ಮೇಲೆ ದಾಳಿ ಆಗಿಲ್ಲ. ಬಲ್ಮಠದ ಪಬ್ ಮುಂದೆ ಭಾನುವಾರ ರಾತ್ರಿ 10-12 ಮಂದಿ ಜಮಾಯಿಸಿದ್ದರು. ಪಬ್ ಒಳಗೆ ಅಪ್ರಾಪ್ತರು ಮದ್ಯ ಸೇವನೆ ಮಾಡುತ್ತಿದ್ದರು ಎಂಬ ಆರೋಪ ಅವರದ್ದಾಗಿತ್ತು. ಬೌನ್ಸರ್ ಪಬ್ ಮ್ಯಾನೇಜರ್ ಜೊತೆ ಮಾತನಾಡಿ ಪಬ್ ಒಳಗಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾನೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಇಡಿ ವಿಚಾರಣೆ ಹಿನ್ನಲೆ – ಇಂದು ಕಾಂಗ್ರೆಸ್ ಮೌನ ಪ್ರತಿಭಟನೆ